ಬೆಂಗಳೂರು : ಬೆಂಗಳೂರಿನ ಆರ್ಮಿ ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಶಾಲೆಯ ಇ-ಮೇಲ್ ಸಂದೇಶ ಕಳಿಸಿದ್ದಾರೆ.
ಬೆಂಗಳೂರಿನ ಅಶೋಕ್ ನಗರದಲ್ಲಿರುವ ಆರ್ಮಿ ಶಾಳೆಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಶೋಕ ನಗರ ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ಹೇಳಿದ್ದು, ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.