ಹಾಸನ : ಜಮೀನು ಮಂಜುರಾತಿಗೆ ಹಾಗೂ ಸ್ಥಳ ಪರಿಶೀಲನೆಗೆ ರೈತರ ಬಳಿ 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಲಂಚ ಸ್ವೀಕರಿಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮದಲ್ಲಿ ನಡೆದಿದೆ.
ಹೌದು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆತ್ತೂರು ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ್ ಇದೀಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ ಜಮೀನು ಮಂಜೂರಾತಿ ಮತ್ತು ಸ್ಥಳ ಪರಿಶೀಲನೆಗೆ 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿ ಆರ್ ಮೋಹನ್ ಕುಮಾರ್ ಹಣ ಸ್ವೀಕರಿಸುವಾಗ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಡಿ.ಆರ್ ಮೋಹನ್ ಕುಮಾರ್ ರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಬಾಲು, ಶಿಲ್ಪ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.