ಹೈದರಾಬಾದ್ : ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಹಾಯಕ ನೃತ್ಯ ನಿರ್ದೇಶಕಿಯೊಬ್ಬರು ಮೂರು ದಿನಗಳ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ.
ರಾಯದುರ್ಗ ಪೊಲೀಸರು ಶೂನ್ಯ ಎಫ್ಎಸ್ಐಆರ್ ದಾಖಲಿಸಿ ಪ್ರಕರಣವನ್ನು ನರಸಿಂಗಿ ಪಿಎಸ್ಗೆ ವರ್ಗಾಯಿಸಿದ್ದಾರೆ. ಸದ್ಯ ಜಾನಿಮಾಸ್ಟರ್ ತಲೆಮರೆಸಿಕೊಂಡಿದ್ದಾನೆ. ನರಸಿಂಗ್ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಜಾನಿ ಮಾಸ್ಟರ್ ಸದ್ಯ ಲಡಾಕ್ ನಲ್ಲಿದ್ದಾರೆ ಎಂದು ವರದಿಯಾಗಿದೆ.
ಮತ್ತೊಂದೆಡೆ, ಈ ಪ್ರಕರಣದಲ್ಲಿ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಅಲ್ಲದೇ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಸಖಿ ಮತ್ತು ಭರೋಸಾ ತಂಡಗಳು ಈಗಾಗಲೇ ಆಕೆಯಿಂದ ಸಾಕಷ್ಟು ವಿವರಗಳನ್ನು ಸಂಗ್ರಹಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರಸಿಂಗಿ ಪೊಲೀಸರು ಸಾಕ್ಷ್ಯ ಸಂಗ್ರಹಿಸಲು ಯತ್ನಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಾನಿ ಮಾಸ್ಟರ್ ಲಡಾಕ್ ನಲ್ಲಿದ್ದಾರೆ ಎಂಬ ಮಾಹಿತಿಯೊಂದಿಗೆ ಪೊಲೀಸ್ ತಂಡಗಳು ಅಲ್ಲಿಗೆ ತೆರಳಿವೆ.