ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಡ್ರಗ್ಸ್ ತಡೆಗಟ್ಟಲು ಹೊಸ ಕಾನೂನು ಜಾರಿಗೊಳಿಸಲು ನಿರ್ಧಾರ ಮಾಡಲಾಗಿದೆ ಎಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಡ್ರಗ್ಸ್ ತಡೆಗಟ್ಟಲು 7 ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡ್ರಗ್ಸ್ ತಡೆಗಟ್ಟಲು ಟಾಸ್ಕ್ ಪೋಸ್ ರಚಿಸಿದ ರಾಜ್ಯ ಸರ್ಕಾರ, ಸಮಿತಿಯಲ್ಲಿ 7 ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಜಿ ಪರಮೇಶ್ವರ್ ನೇಮಕ ಮಾಡಲಾಗಿದೆ. ಇನ್ನುಳಿದ 6 ಸಚಿವರು ಸಮಿತಿಯ ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಎಂಸಿ ಸುಧಾಕರ್ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಿದೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಿಂಗಳಿಗೆ ಒಂದು ಬಾರಿ ಸಭೆ ನಡೆಸುವಂತೆ ಸಮಿತಿ ಸದಸ್ಯರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ. ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ತಡೆಗಟ್ಟಲು ಕಟುಮೆಟಿನ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.