ಬೆಂಗಳೂರು: ಇಂದು ಹೃದಯಾಘಾತದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ನಿಧರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು ಎಂದಿದ್ದಾರೆ.
ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು.
ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ… pic.twitter.com/zgdVtmRX2n
— CM of Karnataka (@CMofKarnataka) September 19, 2024
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs
‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್