ಬೆಂಗಳೂರು: ಬೆಂಗಳೂರು ರೈಲ್ವೆ ವಿಭಾಗದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಲ್ಲಿ ವಾಲ್ ಪೇಂಟಿಂಗ್ ಸ್ಪರ್ಧೆಯ ಆಯೋಜನೆಯನ್ನು ಸೆ.29ರಂದು ಮಾಡಲಾಗಿದೆ.
ಈ ಕುರಿತಂತೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ʼಸ್ವಚ್ಛತೆಯೇ ಸೇವೆʼ ಅಭಿಯಾನದ ಅಂಗವಾಗಿ ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿಯನ್ನು ಮೂಡಿಸಲು ಬೆಂಗಳೂರು ವಿಭಾಗವು ದಿನಾಂಕ 29.09.2024, ಭಾನುವಾರದಂದು ಎಸ್.ಎಂ.ವಿ.ಟಿ. ಬೆಂಗಳೂರು ರೈಲು ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಚ್ಛತಾ ವಿಷಯದ ಕುರಿತು ವಾಲ್ ಪೇಂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಿದೆ ಎಂದಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ತಮ್ಮ ಕಲಾ ಪ್ರತಿಭೆಯನ್ನು ತೋರಿಸಲು ಮತ್ತು ಸ್ವಚ್ಛತೆಯ ಕುರಿತು ಜಾಗೃತಿಯನ್ನು ಮೂಡಿಸುವಲ್ಲಿ ತಮ್ಮ ಕೊಡುಗೆಯನ್ನು ನೀಡಲು ಈ ಸ್ಪರ್ಧೆಯು ಒಂದು ಅತ್ಯುತ್ತಮ ಅವಕಾಶವಾಗಿದೆ ಎಂದು ತಿಳಿಸಿದೆ.
ವಾಲ್ ಪೇಂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಕಾಲೇಜು ವಿದ್ಯಾರ್ಥಿಗಳು ತಮ್ಮ ಹೆಸರನ್ನು 24.09.2024ರೊಳಗೆ ನೋಂದಾಯಿಸಿಕೊಳ್ಳಬೇಕು. ವಿವರ ಮತ್ತು ನೋಂದಣಿಗಾಗಿ ಮೊಬೈಲ್ ಸಂಖ್ಯೆ 9164871716 ಅನ್ನು ಅಥವಾ denhmsbc2024@gmail.com ಇಮೇಲ್ ಐ.ಡಿ.ಯನ್ನು ಸಂಪರ್ಕಿಸಬಹುದು.
BREAKING: ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆಗೆ ಜೀವ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳು ಅರೆಸ್ಟ್
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs