ನವದೆಹಲಿ: ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅತಿಶಿ ಮತ್ತು ಅವರ ಐವರು ಕ್ಯಾಬಿನೆಟ್ ಮಂತ್ರಿಗಳು ಸೆಪ್ಟೆಂಬರ್ 21 ರಂದು ಪ್ರಮಾಣವಚನ ಸ್ವೀಕರಿಸಲಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಇಂದು ತಿಳಿಸಿದೆ.
ಎಎಪಿ ನಾಯಕ ಮುಖೇಶ್ ಅಹ್ಲಾವತ್ ದೆಹಲಿ ಕ್ಯಾಬಿನೆಟ್ನಲ್ಲಿ ಹೊಸ ಮುಖವಾಗಲಿದ್ದು, ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಅವರನ್ನು ಕ್ಯಾಬಿನೆಟ್ ಸಚಿವರಾಗಿ ಉಳಿಸಿಕೊಳ್ಳಲಾಗಿದೆ. ನಿಯೋಜಿತ ಮುಖ್ಯಮಂತ್ರಿ ಅತಿಶಿ ಸೆಪ್ಟೆಂಬರ್ 21ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು, ನಂತರ ಅತಿಶಿ ರಾಷ್ಟ್ರ ರಾಜಧಾನಿಯಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
ಸೆ.29ರಂದು ‘ಬೆಂಗಳೂರು ರೈಲ್ವೆ ನಿಲ್ದಾಣ’ದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ‘ವಾಲ್ ಪೇಂಟಿಂಗ್ ಸ್ಪರ್ಧೆ’ ಆಯೋಜನೆ
‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್