ಶಿವಮೊಗ್ಗ : ಇತ್ತೀಚಿಗೆ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹೃದಯಾಘಾತ ಎನ್ನುವ ಕಾಯಿಲೆ ಸಾಮಾನ್ಯವಾಗಿ ಬಿಟ್ಟಿದೆ. ನಿನ್ನೆ ಯಾದಗಿರಿಯಲ್ಲಿ ಶಿಕ್ಷಕರು ಗದರಿದ್ದಕ್ಕೆ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ವಾಕಿಂಗ್ ಮಾಡುತ್ತಲೇ ಎಂಬಿಬಿಎಸ್ ವಿದ್ಯಾರ್ಥಿ ಒಬ್ಬ ಕುಸಿದು ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ.
ಹೌದು ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಪೃಥ್ವಿರಾಜ್ (20) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಬುಧವಾರ ಸಂಜೆ ನಗರದ ಪ್ರವಾಸಿ ಮಂದಿರದ ಬಳಿ ವಾಕಿಂಗ್ ಮಾಡುವಾಗ ವಿದ್ಯಾರ್ಥಿ ಕುಸಿದು ಬಿದ್ದಿದ್ದ.
ತಕ್ಷಣವೇ ಯುವಕನನ್ನು ಮೋಹನ್ ಎಂಬುವರು ಪ್ರವಾಸಿ ಮಂದಿರ ಮುಂಭಾಗದಲ್ಲಿಯೇ ಇರುವ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾರ್ಗಮಧ್ಯೆಯೇ ವಿದ್ಯಾರ್ಥಿ ಮೃತಪಟ್ಟಿದ್ದಾನೇ ಎಂದು ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದಾರೆ.