ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಾರಿ 69 ಸಾಧಕರಿಗೆ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದಂತ ಶಿವರಾಜ ತಂಡರಗಿ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ.
ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು.
ಅಂದಹಾಗೇ ನವೆಂಬರ್.1ರ ಕನ್ನಡ ರಾಜ್ಯೋತ್ಸವದಂದು ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಮೊದಲು 50 ಮಂದಿಗೆ ಮಾತ್ರವೇ ನೀಡಲಾಗುತ್ತಿತ್ತು. ಆದರೇ ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ನಂತ್ರ, ಪ್ರಶಸ್ತಿ ನೀಡುವಂತ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಅದರಂತೆ ಈ ವರ್ಷ 69 ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.#ರಾಜ್ಯೋತ್ಸವ_ಪ್ರಶಸ್ತಿ#ಹೆಸರಾಯಿತು_ಕರ್ನಾಟಕ… pic.twitter.com/9FARpMa18X
— DIPR Karnataka (@KarnatakaVarthe) September 19, 2024
ನಾಳೆ, ನಾಡಿದ್ದು ಸಚಿವರು, ಶಾಸಕರು, ಅಧಿಕಾರಿಗಳ ನಿಯೋಗ ಹರಿದ್ವಾರ, ವಾರಣಾಸಿಗೆ ಭೇಟಿ: ಗಂಗಾ ಆರತಿ ವೀಕ್ಷಣೆ
ರಾಜ್ಯದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿವೆ ನಿಮಗೆ ಸಿಗುವ ‘ರಜಾ ಸೌಲಭ್ಯ’ಗಳು