ಬೆಂಗಳೂರು : ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.
ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂಗಳಿಂದ 3000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ಜೀವಮಾನದ ಸಾಧನೆ ಪ್ರಶಸ್ತಿ ಪುರಸ್ಕೃತರಾದ ಡಾ.ಉಮಾಶ್ರೀ, ಪ್ರೊ.ಎಚ್.ಎಸ್.ಶಿವಪ್ರಕಾಶ್, ಕೋಟಿಗಾನಲ್ಲಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
BREAKING: ಲೆಬನಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್ | Israel Launches Airstrikes
ರಾಜ್ಯದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿವೆ ನಿಮಗೆ ಸಿಗುವ ‘ರಜಾ ಸೌಲಭ್ಯ’ಗಳು