ಬೆಂಗಳೂರು: ದಲಿತ ಸಮುದಾಯಕ್ಕೆ ಸೇರಿದ ಗುತ್ತಿಗೆದಾರನಿಗೆ ಜಾತಿನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಸದ್ಯ ಜಾಮೀನು ಪಡೆದುಕೊಂಡಿದ್ದು, ಇಂದು ಬಿಡುಗಡೆಯಾಗಲಿದ್ದಾರೆ.
ಈ ನಡುವೆ ಅತ್ಯಾಚಾರ ಪ್ರಕರಣ ಸಂಬಂಧ ನೆಲಮಂಗಲ ನ್ಯಾಯಾಧೀಶರ ಮುಂದೆ ಸಂತ್ರಸ್ತೆ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅತ್ಯಾಚಾರ ನಡೆದ ಸ್ಥಳ ಜೆಪಿ ಪಾರ್ಕ್ ಬಳಿಯ ಶೆಡ್ನಲ್ಲಿ ಮಹಜರು ಕಾರ್ಯ ಮಾಡಲಾಗಿದೆ. ಇಂದು ಬಿಡುಗಡೆಯಾದರು ಕೂಡ ಅವರನ್ನು ಮತ್ತೆ ಪೊಲೀಸರು ಅತ್ಯಾಚಾರ ಸಂಬಂಧ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.