ದಾವಣಗೆರೆ : ನಿನ್ನೆ ದಾವಣಗೆರೆ ನಗರದಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಸಿದ್ದ 18 ಆರೋಪಿಗಳನ್ನು ಇಂದು ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಬಳಿಕ ಜಡ್ಜ್ ಎಲ್ಲಾ 18 ಆರೋಪಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಹೌದು ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಬಸವ ನಗರ ಠಾಣೆಯಲ್ಲಿ ಈ ಕುರಿತು ಎರಡು ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿತ 18 ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಎಂಸಿಸಿಎ ಬ್ಲಾಕ್ ನಲ್ಲಿರುವ ಜಡ್ಜ್ ಪ್ರಶಾಂತ ನಿವಾಸದಲ್ಲಿ ಇದೀಗ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದಾರೆ. ಸದ್ಯ 18 ಆರೋಪಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.