ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಮುನಿರತ್ನರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಈ ಒಂದು ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಡ್ಸ್ ಇರುವವರನ್ನು ಮುನಿರತ್ನ ಬಯಲಾಜಿಕಲ್ ವಾರ್ ರೀತಿ ಬಳಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಯಾಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದು, ತನಿಖೆಗೆ ಒಂದು ವಿಶೇಷ ತಂಡ ರಚನೆಯಾಗಬೇಕು. ಯಾರ್ಯಾರನ್ನು ಯಾವ ಯಾವ ಸಂದರ್ಭದಲ್ಲಿ ಬಳಸಿಕೊಂಡಿದ್ದಾರೆ, ಯಾವ ಯಾವ ರೀತಿ ಬಳಸಿಕೊಂಡಿದ್ದಾರೆ ಎಂಬುವುದರ ಕುರಿತು ಸಮಗ್ರ ತನಿಖೆ ಆಗಬೇಕು.
ಎಸ್ಐಟಿ ಅಥವಾ ಬೇರೆ ತನಿಖಾ ಮಾಡಬೇಕು ಎಂದು ಒತ್ತಾಯಿಸಿದ್ದೇವೆ ತನಿಖೆಯಿಂದ ಬಿಜೆಪಿ ನಾಯಕರ ಬಣ್ಣ ಬಯಲಾಗಬೇಕು ಸಿಟಿ ರವಿ ಆರ್ ಅಶೋಕ್ ಎಚ್ ಡಿ ಕುಮಾರಸ್ವಾಮಿ ಇವರ ಬೆನ್ನಿಗೆ ನಿಂತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು.