ಮೈಸೂರು : ಈ ಬಾರಿಯ ಮೈಸೂರು ದಸರಾ ಉದ್ಘಾಟಕರು ಯಾರು ಎಂಬುವುದು ತೀವ್ರ ಕುತೂಹಲ ಮೂಡಿಸಿತ್ತು. ಇದೀಗ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹಿತಿಗಳಾದ ಹಂ.ಪ ನಾಗರಾಜಯ್ಯ ಈ ಬಾರಿಯ ದಸರಾ ಉದ್ಘಾಟಕರು ಎಂದು ಅವರು ಘೋಷಿಸಿದ್ದಾರೆ.
ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ ಈ ಬಾರಿ ಮೈಸೂರು ದಸರಾವನು ಸಾಹಿತಿಗಳಾದ ಹಂ.ಪ ನಾಗರಾಜಯ್ಯ ಉದ್ಘಾಟಿಸಲಿದ್ದಾರೆ.ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.