ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು.
ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬAಧಿಸಿದAತೆ ಇ-ಆಸ್ತಿ ತಂತ್ರಾAಶ ಮತ್ತು ಕಾವೇರಿ ತಂತ್ರಾAಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾAಶದಿAದಲೇ ಪಡೆಯಬೇಕು.
ಉಪಯೋಗಗಳು:
ಇ-ಆಸ್ತಿ ತಂತ್ರಾಂಶದಿಂದ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದಾಗಿದೆ. ಹಾಗಾಗಿ ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.