ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಆರೋಪಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ.ಇದೀಗ ದರ್ಶನ್ಗೆ ಸಿಗಬೇಕಿರುವ ಕೆಲವು ಅಗತ್ಯ ಸೌಲಭ್ಯಗಳನ್ನು ಜೈಲು ಅಧಿಕಾರಿಗಳು ಕೊಟ್ಟಿಲ್ಲವೆಂದು ಆರೋಪಿಸಿ ದರ್ಶನ್ ಪರವಾಗಿ ಅವರ ಕುಟುಂಬದವರು ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಹೌದು ಬಳ್ಳಾರಿ ಜೈಲಿನಲ್ಲಿ ಕಠಿಣ ನಿಯಮಗಳನ್ನು ಎದುರಿಸುವ ಪರಸ್ಥಿತಿ ನಿರ್ಮಾಣವಾಗಿದೆ. ಬಳ್ಳಾರಿ ಜೈಲಿನ ಅಧಿಕಾರಿಗಳು ಶಿಸ್ತಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಇದು ದರ್ಶನ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೆಲವು ‘ಸೌಲಭ್ಯ’ಗಳಿಗಾಗಿ ಪದೇ ಪದೇ ಜೈಲಧಿಕಾರಿಗಳ ಬಳಿ ದರ್ಶನ್ ಮನವಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೆ ದರ್ಶನ್ರ ಕುಟುಂಬಸ್ಥರು ಬಳ್ಳಾರಿ ಜೈಲು ಸಿಬ್ಬಂದಿ ವಿರುದ್ಧ ದೂರು ನೀಡಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಜೈಲು ಸೇರಿದ ಆರಂಭದಿಂದಲೂ ಹಾಸಿಗೆ ಮತ್ತು ಮೆತ್ತನೆಯ ದಿಂಬಿಗೆ ಡಿಮ್ಯಾಂಡ್ ಮಾಡುತ್ತಲೇ ಇದ್ದಾರೆ. ಬಳ್ಳಾರಿ ಜೈಲಿನಲ್ಲೂ ಅದೇ ಡಿಮ್ಯಾಂಡ್ ಮುಂದುವರೆದಿದೆ ಆದರೆ ಜೈಲು ಅಧಿಕಾರಿಗಳು ವಿಶೇಷ ಹಾಸಿಗೆ ಬಿಂದು ನೀಡಲು ನಿರಾಕರಿಸಿದ್ದಾರೆ. ಇದೇ ಕಾರಣ ಇಟ್ಟುಕೊಂಡು ಇದೀಗ ದರ್ಶನ್ ಕುಟುಂಬ ಮಾನವ ಹಕ್ಕುಗಳ ಸಮಿತಿಗೆ ದೂರು ನೀಡಲು ನಿರ್ಧರಿಸಿದೆ.
ದರ್ಶನ್ ಬೇಡಿಕೆ ಇಟ್ಟಿರುವ ಕೆಲವು ವಸ್ತುಗಳನ್ನು ನೀಡಲು ಜೈಲು ಅಧಿಕಾರಿಗಳು ನಿರಾಕರಿಸಿರುವ ಕಾರಣ, ಮಾನವ ಹಕ್ಕು ಆಯೋಗ ದೂರು ನೀಡಲು ದರ್ಶನ್ ಕುಟುಂಬ ನಿರ್ಧರಿಸಿದೆ ಎನ್ನಲಾಗುತ್ತಿದೆ. ದರ್ಶನ್ ಪತ್ನಿ, ತಾಯಿ ಅಥವಾ ಸಹೋದರ, ಬಳ್ಳಾರಿ ಜೈಲು ಅಧಿಕಾರಿಗಳ ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ದೂರು ದಾಖಲಿಸಲಿದ್ದು, ವ್ಯಕ್ತಿಗೆ ಬೇಕಾದ ಕೆಲವು ಕನಿಷ್ಟ ಸೌಲಭ್ಯಗಳನ್ನು ನೀಡಲು ಜೈಲು ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲು ಸಜ್ಜಾಗಿದ್ದಾರೆ.