ಬೆಂಗಳೂರು: ನಗರದ ರಾಜರಾಜೇಶ್ವರಿ ಕಾಲೇಜಿನಲ್ಲಿನ ಶೌಚಾಲಯದಲ್ಲಿ ಯುವತಿಯರ ವೀಡೀಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದಂತ ಶಾಕಿಂಗ್ ವಿಷಯ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ಪೊಲೀಸರಿಂದ ಓರ್ವ ಅನುಮಾನಾಸ್ಪದ ಯುವಕನನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ರಾಜರಾಜೇಶ್ವರಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ನಿಂದ ಯುವತಿಯ ವೀಡಿಯೋವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದಂತ ಘಟನೆ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ರಾಜರಾಜೇಶ್ವರಿ ಕಾಲೇಜಿನ ವಿದ್ಯಾರ್ಥಿನಿಯರು ಯುವಕನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿರುವಂತ ವಿಷಯ ತಿಳಿದಂತ ಕುಂಬಳಗೋಡು ಠಾಣೆಯ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಮನವೊಲಿಸಿದರು. ಅಲ್ಲದೇ ಘಟನೆಯ ಸಂಬಂಧ ಶೌಚಾಲಯದಲ್ಲಿ ಯುವತಿಯ ವೀಡಿಯೋ ಚಿತ್ರೀಕರಿಸುತ್ತಿದ್ದಂತ ಅನುಮಾನಾಸ್ಪದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗ ಯುವಕನನ್ನು ಬಂಧಿಸಿರುವಂತ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!
BREAKING : `ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು ಜನತೆ ಗಮನಕ್ಕೆ: ಸೆ.21ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut