ಬೆಂಗಳೂರು : ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿವಾದದ ನಡುವೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ಮಹತ್ವದ ಸುತ್ತೋಲೆ ಹೊರಡಿಸಿದ್ದು, ಮುಜರಾಯಿ ದೇಗುಗಳಲ್ಲಿ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸುವಂತೆ ಆದೇಶ ಹೊರಡಿಸಿದೆ.
ಹೌದು, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಿದೆ.
ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗಳ ದೇಗುಲಗಳಲ್ಲಿ ಪ್ರಸಾದ ಸೇರಿ ವಿವಿಧ ದಾಸೋಹಗಳಿಗೆ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಇಂದು ಮಹತ್ವದ ಆದೇಶ ಹೊರಡಿಸಿದೆ.