ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮೂಡಬಿದಿರಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾಲರಾ ಸೋಂಕು ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ ಎಂಬುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಹೋಸ್ಮಾರು ಬಳಿಯ ಹೋಟೆಲ್ ಒಂದರಲ್ಲಿ ಸಾಮೂಹಿಕವಾಗಿ ಕಾಲರಾ ಹರಡಿರುವಂತ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಇಂದು ಡಿಹೆಚ್ ಓ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿದರು.
ಇಂದಿನ ಹೋಟೆಲ್ ಮಾಲೀಕರ ಸಭೆಯಲ್ಲಿ ಆಹಾರ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಿ. ಸ್ವಚ್ಛತೆಯ ಕಡೆಗೆ ಗಮನ ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿ ತಿಮ್ಮಯ್ಯ ಮನವಿ ಮಾಡಿದರು.
BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ