ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ನಿನ್ನೆ ಜಾಮೀನು ಪಡೆದು ಹೊರಬಂದಿದ್ದ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇದೀಗ ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಮನಗರದ ರೆಸಾರ್ಟ್ ವೊಂದಕ್ಕೆ ದೂರುದಾರ ಮಹಿಳೆಯನ್ನು ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದಾರೆ.