ಬೆಳಗಾವಿ: ಜಿಲ್ಲೆಯಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಡಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಇಂದು ಪ್ಯಾಲೆಸ್ತೀನ್ ಧ್ವಜ ಹಾರಾಡಿರುವುದಾಗಿ ಹೇಳಲಾಗುತ್ತಿದೆ. ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಹಾರಿಸಲಾಗಿದೆ. ಕೂಡಲೇ ಅಲರ್ಟ್ ಆದಂತ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಂದಹಾಗೇ ಗಣೇಶ ಮೂರ್ತಿ ವಿಸರ್ಜನೆಯ ಹಿನ್ನಲೆಯಲ್ಲಿ ಇಂದಿಗೆ ಈದ್ ಮಿಲಾದ್ ಮೆರವಣಿಗೆಯನ್ನು ಮುಂದೂಡಲಾಗಿತ್ತು. ಇಂದು ಈದ್ ಮಿಲಾದ್ ಮೆರವಣಿಗೆಯ ವೇಳೆಯಲ್ಲೇ ಚಿಕ್ಕೋಡಿ ಪಟ್ಟಣದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಲಾಗಿದೆ.
BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ