ಬಳ್ಳಾರಿ : ಆಶ್ರಯ ಬಡಾವಣೆಯ ನಕಲು, ದಾಖಲೆ, ಹಕ್ಕುಪತ್ರ ಸೃಷ್ಟಿಸಿ ಮಾರಾಟ ಮಾಡಲು ಯತ್ನಿಸಲಾಗುತ್ತಿದ್ದು, ಸಾರ್ವಜನಿಕರು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ನಗರ ಆಶ್ರಯ ಯೋಜನೆಯಡಿ ಆಶ್ರಯ ಬಡಾವಣೆ ರಚನೆ ಮಾಡಿ ವಸತಿ ರಹಿತ ಕುಟುಂಬಗಳಿಗೆ ನಿವೇಶನ, ಮನೆಗಳನ್ನು ಹಂಚಿಕೆ ಮಾಡಲಾಗಿದ್ದು, ಈಗಾಗಲೇ ಹಕ್ಕುಪತ್ರಗಳನ್ನು ವಿತರಿಸಲಾಗಿದೆ.
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಕಲು ಹಕ್ಕುಪತ್ರ, ದಾಖಲೆಗಳನ್ನು ಸೃಷ್ಠಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಕಂಡುಬAದಿದ್ದು, ಸಾರ್ವಜನಿಕರು ಎಚ್ಚರ ವಹಿಸಬೇಕು. ಇಂತಹ ವ್ಯಕ್ತಿಗಳು ಕಂಡುಬAದಲ್ಲಿ ಪಾಲಿಕೆಗೆ ಕೂಡಲೇ ದೂರು ನೀಡಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಪ್ರಕಟಣೆ ತಿಳಿಸಿದೆ.