ಹಾಸನ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ವಿದ್ಯಾರ್ಥಿ ಬಲಿಯಾಗಿದ್ದು, ಎದೆನೋವಿನಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿ ಮನೆಯಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
11 ವರ್ಷದ ಬಾಲಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಕಾವ್ಯಶ್ರೀ ಎಂಬುವವರ ಮಗ ಸಚಿನ್ ಎಂದು ತಿಳಿಯಲಾಗಿದೆ.
ನಿನ್ನೆ ಶಾಲೆಯಲ್ಲಿ ಸ್ವಲ್ಪ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಶಾಲೆಗೆ ಹೋಗದೇ ಮನೆಯಲ್ಲೇ ಇದ್ದ ಸಚಿನ್ ಎದೆನೋವಿನಿಂದ ಸಾವನ್ನಪ್ಪಿದ್ದಾನೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಲೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮುಂಚೆಯೇ ಸಚಿನ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.