ಬೆಂಗಳೂರು : ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದರು.
ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಇಂದು ಅವರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದರು.ಇದೀಗ ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಮುಗಿಸಿ ಕಚೇರಿಯಿಂದ ಯಡಿಯೂರಪ್ಪ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಈ ಇಬ್ಬರೂ ನಾಯಕರು ಜಂಟಿಯಾಗಿ ಡಿನೋಟಿಫಿಕೇಷನ್ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿದೆ. ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು A1 ಆರೋಪಿಯನ್ನಾಗಿ ಮಾಡಲಾಗಿದೆ.
ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಗುಂಟೆ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಹಾಗೂ ಬಿಎಸ್ವೈ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು ಎಂಬ ಆರೋಪವಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ, ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ IAS ಅಧಿಕಾರಿ ರಾಕೇಶ್ ಸಿಂಗ್ ಅವರಿಂದ ನಿಯಮ 164ರಡಿ ಲೋಕಾಯುಕ್ತ ಅಧಿಕಾರಿಗಳು ಮಾಜಿಸ್ಟ್ರೇಟ್ ಮುಂದೆ ಹೇಳಿಕೆ ಪಡೆದುಕೊಂಡಿದ್ದರು.