ಬೆಂಗಳೂರು: ನಗರದಲ್ಲಿ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮಾಡರಿಯಲ್ಲೇ ಯುವತಿಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಯುವತಿಯೊಬ್ಬಳನ್ನು ಕೊಲೆಗೈದಿರುವಂತ ದುಷ್ಕರ್ಮಿಗಳು, ಆಕೆಯ ದೇಹವನ್ನು ಪೀಸ್ ಪೀಸ್ ಮಾಡಿ ಪ್ರಿಡ್ಜ್ ನಲ್ಲಿ ಇಟ್ಟಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ವೈಯಾಲಿಕಾವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಹತ್ತರಿಂದ ಹದಿನೈದು ದಿನಗಳ ಹಿಂದೆ ನಡೆದಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 25 ರಿಂದ 26 ವರ್ಷದ ಯುವತಿಯನ್ನು ಕೊಲೆಗೈದಿರುವಂತ ಆರೋಪಿಗಳು, ಪ್ರಿಡ್ಜ್ ನಲ್ಲಿ ದೇಹವನ್ನು ಪೀಸ್ ಪೀಸ್ ಮಾಡಿ ಇಟ್ಟಿರುವುದಾಗಿ ಹೇಳಲಾಗುತ್ತಿದೆ.
ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ವಯಾಲಿಕಾವಲ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ವೈಯಾಲಿಕಾವಲ್ ಠಾಣೆಯ ಪೊಲೀಸರು, ಆರೋಪಿಗಳ ಪತ್ತೆಗೆ ಮಲೆ ಬೀಸಿದ್ದಾರೆ.
ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!