ಶಿವಮೊಗ್ಗ : ಜಿಲ್ಲೆಯಲ್ಲಿ ಮೆಸ್ಕಾಂನಿಂದ ( MESCOM ) ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆ.24ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.
ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಪವರ್ ಕಟ್ ಆಗಲಿದೆ.
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು ಕರೆಂಟ್ ಇರೋದಿಲ್ಲ.
ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಕುಮಾರಣ್ಣನ ಆಡಳಿತ ಸ್ವಂತಕ್ಕಾಗಿ, ನಮ್ಮ ಆಡಳಿತ ಜನರಿಗಾಗಿ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!
BREAKING : ವಾಯುಪಡೆ ಮುಂದಿನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ‘ಎ.ಪಿ ಸಿಂಗ್’ ನೇಮಕ |Air Marshal A.P. Singh