ಬೆಂಗಳೂರು : ದಿನಗೂಲಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ಅನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿ ಅನ್ವಯ ಸೆಪ್ಟೆಂಬರ್ 1 ರಿಂದ ಪೂರ್ವನ್ವಯವಾಗುವಂತೆ ಆರ್ಥಿಕ ಸೌಲಭ್ಯ ನೀಡಲು ಸರ್ಕಾರ ಆದೇಶಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಕಾಲ ಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆ ಶೇ.90 ರಷ್ಟು ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂಧುವರಿಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಟ ವೇತನದ ಮೇಲೆ ತುಟ್ಟಿಭತ್ಯೆಯಾಗಿ ಮಂಜೂರು ಮಾಡಬೇಕು. 2024ರ ಪರಿಷ್ಕೃತ ವೇತನ ಶ್ರೇಣಿಗಳ ಅನ್ವಯ ಅವರುಗಳ ಸೇವೆಯಲ್ಲಿ ಮುಂದುವರಿಸಿದ ಹುದ್ದೆಯ ಕಾಲಿಕ ಶ್ರೇಣಿಯ ಕನಿಷ್ಟ ವೇತನ ನಿಗದಿಗೊಳಿಸಬೇಕು.
ರಾಜ್ಯ ಸರ್ಕಾರಿ ನೌಕರರಿಗೆ ಕಾಲ ಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆ ಸಾಮಾನ್ಯದರಗಳ ಶೇ.90 ರಷ್ಟಟನ್ನು ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂದುವರಿಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಟ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.