ದಕ್ಷಿಣ ಕನ್ನಡ: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ.
18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಇದರ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವಂತ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9591044014, 9448348569, 9980885900, 9902594791 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ ವಾಟ್ಸಾಪ್ ಮೂಲಕವೂ ಅರ್ಜಿಯನ್ನು 6364561982 ಗೆ ಕಳುಹಿಸಬಹುದಾಗಿದೆ ಎಂದು ಹೇಳಿದೆ.
BREAKING: ದೇಶದ ‘8 ಹೈಕೋರ್ಟ್’ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ‘ಕೇಂದ್ರ ಸರ್ಕಾರ’ ಅಧಿಸೂಚನೆ
BREAKING : ವಾಯುಪಡೆ ಮುಂದಿನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ‘ಎ.ಪಿ ಸಿಂಗ್’ ನೇಮಕ |Air Marshal A.P. Singh








