ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ಪೊಲೀಸರಿಂದ ಮೂವರು ಡ್ರಗ್ಸ್ ಪೆಡ್ಲರ್ಗಳ ಬಂಧನವಾಗಿದ್ದು, ಸಂದೀಪ್ (23) ಅಖಿಲ್ (22) ಆಕಾಶ (21) ಬಂಧಿತ ಗಾಂಜಾ ಪೆಡ್ಲರ್ ಗಳು ಎಂದು ತಿಳಿದುಬಂದಿದೆ.
ಬಂಧಿತರಿಂದ 6 ಕೆಜಿಗು ಹೆಚ್ಚು ಗಾಂಜಾ, ಹಾಗೂ 20 ಗ್ರಾಂ. ಹೈಡ್ರೋ ಗಾಂಜಾ ಮತ್ತು ನಗದು ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕೇರಳದಿಂದ ರೈಲಿನ ಮುಖಾಂತರ ಬೆಂಗಳೂರಿಗೆ ಈ ಗ್ಯಾಂಗ್ ಗಾಂಜಾ ಸಪ್ಲೈ ಮಾಡುತ್ತಿತ್ತು. ಹೊರ ರಾಜ್ಯದವರನ್ನೇ ಟಾರ್ಗೆಟ್ ಮಾಡಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು.
ಇದೀಗ ಮತ್ತೊಬ್ಬ ಪ್ರಮುಖ ಆರೋಪಿ ಅಲ್ತಾಫ್ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.