ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಹಪ್ಪಳ, ಉಪ್ಪಿನಕಾಯಿ, ಮಸಾಲ ಪೌಡರ್ ತಯಾರಿಕೆಯ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ 10 ದಿನಗಳ ಕಾಲ ಉಚಿತ ಹಬ್ಬಳ, ಉಪ್ಪಿನಕಾಯಿ, ಮಸಾಲ ಪೌಡರ್ ತಯಾರಿಕೆ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದೆ.
ದಿನಾಂಕ 15-10-2024ರಿಂದ 24-10-2024ರವರೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. 18 ರಿಂದ 45 ವರ್ಷದೊಳಗಿನ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ವಾಟ್ಸ್ ಆಪ್ ಮೂಲಕ ಅರ್ಜಿಯನ್ನು ಸಲ್ಲಿಸುವುದಾದರೇ 6364561982ಗೆ ಕಳುಹಿಸಬಹುದಾಗಿದೆ. ಇಲ್ಲವೇ www.rudsetujire.com ಗೆ ಭೇಟಿ ನೀಡಿಯೂ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ 9591044014, 9448348569, 9980885900 ಹಾಗೂ 9902594791 ಸಂಖ್ಯೆಗೆ ಕರೆ ಮಾಡಿ ಪಡೆಯಬಹುದಾಗಿದೆ.