ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೊಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ಬಳಿಕ ಇದೀಗ ಡಿಮಾರ್ಟ್ ಹಿಂಬದಿಯ ಕೆರೆಯ ಬಳಿ ಚಿರತೆ ಪತ್ತೆಯಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಗಿದೆ.
ಇತ್ತೀಚಿಗಷ್ಟೇ ಎಲೆಕ್ಟ್ರಾನಿಕ್ ಸಿಟಿ ಸುತ್ತಾಮುತ್ತಾ ಚಿರತೆ ಕಾಣಿಸಿಕೊಂಡಿತ್ತು. ಇದೀಗ ಡಿಮಾರ್ಟ್ ಹಿಂಬದಿಯ ಕೆರೆಯ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿರತೆ ಈ ಪ್ರದೇಶಗಳಲ್ಲಿ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಿರತೆ ಕಾರ್ಯಪಡೆಯ 40 ಸಿಬ್ಬಂದಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೀಡು ಬಿಟ್ಟಿದ್ದಾರೆ.
ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿಯ ಡಿ-ಮಾರ್ಟ್ ಹಿಂಭಾಗದಲ್ಲಿ ಹಲವು ಕಡೆ ಚಿರತೆ ಓಡಾಡಿರುವ ಹೆಜ್ಜೆ ಗುರುತು ಸಿಕ್ಕಿದ್ದು, ಇದಾದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಚಿರತೆ ಕಾರ್ಯ ಹುಡುಕಾಟ ನಡೆಸುತ್ತಿದ್ದಾರೆ. ಚಿರತೆ ಓಡಾಡುವ ಚಲನವಲನ ಕಂಡು ಹಿಡಿಯಲು ಎನ್‌ಟಿಟಿಎಫ್ ಆವರಣ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಹಲವು ಕಡೆ ಒಟ್ಟು ಐದು ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.