ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯೂಟರ್ನ್ ತೆಗೆದುಕೊಲ್ಳುವಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೊಸಕೋಟೆ ತಾಲೂಕಿನ ದೇವನಗುಂದಿ ಕ್ರಾಸ್ ಬಳಿ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿದ ಬೈಕ್ ಸವಾರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಲಕೊಂಡಹಳ್ಳಿ ಗ್ರಾಮದ ರಂಗಪ್ಪ ಹಾಗೂ ಸುಧಾ ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.