ಬೆಂಗಳೂರು: ಯಾದಗಿರಿಯಲ್ಲಿ ಮೃತ ಪಿಎಸ್ಐ ಪರಶುರಾಮ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರವನ್ನು ನೀಡಿ. ಅಲ್ಲದೇ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಪಿಎಸ್ಐ ಪರಶುರಾಮ್ ಅವರ ಸ್ವಗ್ರಾಮಕ್ಕೆ ಆಗಸ್ಟ್ 08 ರಂದು ಮಾನ್ಯ ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳುವ ಸಂದರ್ಭಕದಲ್ಲಿ ಅವರ ಕುಟುಂಬಕ್ಕೆ ರೂ. 50 ಲಕ್ಷ ಪರಿಹಾರ ಹಾಗೂ ಅವರ ಪತ್ನಿಯಾದ ಶ್ರೀಮತಿ ಶ್ವೇತಾ ರವರಿಗೆ ಸೂಕ್ತ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿರುವುದು ಗಮನಿಸಿದ್ದೇನೆ. ಆದರೆ ಆಶ್ವಾಸನೆಯನ್ನು ನೀಡಿ ಸುಮಾರು 45 ದಿನಗಳು ಕಳೆದರೂ ಕೂಡ ಅವರಿಗೆ ಯಾವುದೇ ರೀತಿಯ ಪರಿಹಾರ ನೀಡಿದೇ ಇರುವುದು ಮತ್ತು ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಇರುವುದೇ ಖೇಧಕರ ವಿಷಯವಾಗಿದೆ ಎಂದಿದ್ದಾರೆ.
ಮೃತ ಪಿಎಸ್ಐ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಮಾನ್ಯ ಶ್ರೀ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಶ್ರೀ ಪಂಪನಗೌಡ ಇವರುಗಳ ವಿರುದ್ಧ ಜಾತಿ ನಿಂದನೆ 238 (THE BHARATIYA NYAYA SANHITA (BNS), 2023 (U/s-352, 108, 3(5)); SC AND THE ST (PREVENTION OF ATTROCITIES) ACT, 1989 (U/s- 3(2)(V), 3(1)(r)(s)) ದೂರು ದಾಖಲಾದರೂ ಸಹ ಇದುವರೆಗೂ ಅವರ ವಿಚಾರಣೆ ನಡೆದಿರುವುದಿಲ್ಲ ಹಾಗೂ ಅವರನ್ನು ಬಂಧಿಸಿ ವಿಚಾರಣೆಯನ್ನು ನಡೆಸುವ ಕಾರ್ಯವು ಆಗಿರುವುದಿಲ್ಲ ಎಂದು ಹೇಳಿದ್ದಾರೆ.
ಆದ್ದರಿಂದ ಮೃತ ಪಿಎಸ್ಐ ಪರಶುರಾಮ್ ಅವರ ಕುಟುಂಬಕ್ಕೆ ಅಪಾರವಾದ ಅನ್ಯಾಯವಾಗಿರುವ ಕಾರಣ ತಾವುಗಳು ನೀಡಿರುವ ಆಶ್ವಾಸನೆಗಳನ್ನು ಹಾಗೂ ಪರಿಹಾರಗಳನ್ನು ತಕ್ಷಣ ಪೂರೈಸಬೇಕು ಮತ್ತು ಯಾದಗಿರಿ ಶಾಸಕ ಶ್ರೀ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಶ್ರೀ ಪಂಪನಗೌಡ ಇವರ ವಿರುದ್ಧ ವಿಳಂಬ ನೀತಿ ಅನುಸರಿಸದೇ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹ ಪೂರ್ವಕವಾಗಿ ಕೋರಿದ್ದಾರೆ.
BIG NEWS : ವಾಹನ ಬೇಕೆಂದರೆ 1 ಲಕ್ಷ ಲಂಚ ಕೊಡಿ : ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್!
ಇರಾನ್ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 30 ಕಾರ್ಮಿಕರು ಸಾವು, ಹಲವರಿಗೆ ಗಾಯ | Iran coal mine blast