ಬೆಂಗಳೂರು : ನಿನ್ನೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ದೆಹಲಿಯ ಶ್ರದ್ಧಾ ವಾಕರ್ ಹತ್ಯೆಯ ಮಾದರಿಯಲ್ಲಿ ಬೆಂಗಳೂರಲ್ಲಿ ಕೂಡ ಮಹಿಳೆಯ ಭೀಕರ ಕೊಲೆ ನಡೆದಿದೆ. ಇದೀಗ ಬೆಂಗಳೂರಿನ ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 30ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಹೇಮಂತ್ ಪತ್ನಿ ಸಾವಿಗೆ ಆಕೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಹೌದು ಮುಕ್ತ, ಶಶಿಧರ್ ಮತ್ತು ಸುನೀಲ್ ಮೃತ ಮಹಾಲಕ್ಷ್ಮಿಯ ಸಹೋದ್ಯೋಗಿಗಳು. ಉತ್ತರಾಖಂಡ್ ಮೂಲದ ಅಶ್ರಫ್ ಮಹಾಲಕ್ಷ್ಮಿ ಜೊತೆ ಸಲುಗೆಯಿಂದ ಇದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಲಕ್ಷ್ಮಿ ತಾನು ಕೆಲಸ ಮಾಡುವ ಕಂಪನಿಯಲ್ಲಿ ಜಗಳ ಮಾಡಿಕೊಂಡಿದ್ದಳು ಎಂದು ಮಾಹಿತಿ ನೀಡಿದ್ದಾರೆ.
ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್ ಮೇಲೆ ನನಗೆ ಅನುಮಾನ ಇದೆ. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್ ವಿರುದ್ಧ ದೂರು ಕೊಟ್ಟಿದ್ದೆ. ಅಶ್ರಫ್ ಉತ್ತರಾಖಂಡ್ ಮೂಲದವನು. ಒಂದು ದಿನ ಮಹಾಲಕ್ಷ್ಮೀ ಮೊಬೈಲ್ ಚೆಕ್ ಮಾಡಿದಾಗ ಅಶ್ರಫ್ ಜೊತೆ ಸಂಪರ್ಕದಲ್ಲಿರುವುದು ತಿಳಿಯಿತು ಎಂದು ಕೊಲೆಯಾದ ಮಹಾಲಕ್ಷ್ಮೀ ಪತಿ ಹೇಮಂತ್ ದಾಸ್ ಹೇಳಿದ್ದಾರೆ.
ಮುಂದುವರೆದು ನೆಲಮಂಗಲದಲ್ಲಿ ನಾನು ಮೊಬೈಲ್ ಶಾಪ್ ಇಟ್ಟುಕೊಂಡಿದ್ದೇನೆ. ಮೊಬೈಲ್ ಶಾಪ್‌ನಲ್ಲೇ ಮಗುವನ್ನು ನೋಡಿಕೊಂಡು ವಾಪಸ್ ಹೋಗುತ್ತಿದ್ದಳು. 25 ದಿನಗಳ ಹಿಂದೆ ಮೊಬೈಲ್ ಶಾಪ್‌ಗೆ ಬಂದು ಮಗುವನ್ನು ನೋಡಿ ಹೋಗಿದ್ದಳು. ಮಗು ನೋಡಲು ಬಂದಾಗ ನನ್ನ ಜೊತೆ ಕೋಪದಲ್ಲೇ ಮಾತನಾಡುತ್ತಿದ್ದಳು ಎಂದು ಹೇಳಿದರು.