ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲು ಸೇರಿ ಬರೋಬ್ಬರಿ 100 ದಿನಗಳು ಪೂರೈಸಿವೆ. ಇದೀಗ ಕೊಲೆ ಆರೋಪಿ ದರ್ಶನ್ ಮೊದಲ ಬಾರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದೀಗ ಜಾಮೀನು ಅರ್ಜಿಯಲ್ಲಿ ಸ್ಪೋಟಕ ವಾದಂತಹ ಮಾಹಿತಿ ಬಹಿರಂಗವಾಗಿದೆ.
ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಗೌಡ A1 ಆರೋಪಿಯಾಗಿದ್ದು, ದರ್ಶನ್ A2 ಆರೋಪಿಯಾಗಿದ್ದಾರೆ. ದರ್ಶನ್ ಅವರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ವರೆಗೂ ಕೂಡ ಇದೇ ರೀತಿಯಾದಂತಹ ಒಂದು ಆರೋಪಿಗಳ ಪಟ್ಟಿ ಉಲ್ಲೇಖ ಮಾಡಿ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ಆದರೆ ಮೊದಲ ಬಾರಿಗೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ, ಅರ್ಜಿಯಲ್ಲಿ ರೇಣುಕಾ ಸ್ವಾಮಿ ಕೊಲೆಗೂ ಹಾಗೂ ದರ್ಶನ್ಗು ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಎಂಬ ಮಾಹಿತಿ ಉಲ್ಲೇಖಿಸಲಾಗಿದೆ. ಹಾಗಾದರೆ ರೇಣುಕಾಸ್ವಾಮೆಯನ್ನು ಕಿಡ್ನ್ಯಾಪ್ ಮಾಡಿ ಬೆಂಗಳೂರಿಗೆ ಕರೆತಂದಿದ್ದು ಯಾರು? ಮುಂದೆ ಓದಿ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ ಗೂ ಯಾವುದೇ ಸಂಬಂಧವಿಲ್ಲ. ಆದರೆ ಸುಮ್ಮನೆ ದರ್ಶನ್ ಹೆಸರನ್ನು ಎಳೆದು ತರಲಾಗಿದೆ. ರೇಣುಕಾಸ್ವಾಮಿ ಅಪಹರಣ ಮಾಡಲು ನಾನು ಸೂಚನೆ ನೀಡಿಲ್ಲ. ರೇಣುಕಾಸ್ವಾಮಿ ಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಎ10 ಆರೋಪಿ ವಿನಯ್ ಹಾಗೂ ಎ3 ಆರೋಪಿ ಪವನ್ ಸೂಚನೆ ಮೇರೆಗೆ ಅಪಹರಣ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆಗಿರುವ ದರ್ಶನ್ ತಮ್ಮ ವಕೀಲರ ಮೂಲಕ ನಿನ್ನೆ ಮೊದಲ ಬಾರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ.