ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅಂಗನವಾಡಿಯ ಮೇಲ್ಚಾವಣಿ ಕಾಂಕ್ರಿಟ್ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮೆಹಬೂಬ್ ನಗರದಲ್ಲಿ ಇಂದು ಅಂಗನವಾಡಿಯ ಮೇಲ್ಚಾವಣಿ ಕುಸಿದ ಪರಿಣಾಮ ಅಂಗನವಾಡಿಯಲ್ಲಿದ್ದ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಬೇರೆ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಅಂಗನವಾಡಿಯಲ್ಲಿ 20 ಕ್ಕೂ ಹೆಚ್ಚು ಮಕ್ಕಳಿದ್ದರು.
ಅಮನ್, ಮನ್ವಿತ್, ಮರ್ದನ್, ಸುರಕ್ಷಾ ಗಾಯಗೊಂಡ ಮಕ್ಕಳಾಗಿದ್ದು, ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನಗರಸಭೆ ಅಧ್ಯಕ್ಷ, ಸದಸ್ಯರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.