ಬೆಂಗಳೂರು: ಹುಬ್ಬಳ್ಳಿ ವಿಭಾಗದ ಕೂಡಗಿ ರೈಲ್ವೆ ಯಾರ್ಡ್ ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ, ಕೆಲ ರೈಲುಗಳನ್ನು ಭಾಗಶಃ ರದ್ದು & ನಿಯಂತ್ರಿಸಲಾಗುತ್ತದೆ. ಅವುಗಳ ಮಾಹಿತಿ ಈ ಕೆಳಗಿನಂತಿದೆ.
ಭಾಗಶಃ ರದ್ದು:
1. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 ರವರೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 06919 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟ ವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ.
2. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 ರವರೆಗೆ ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ.
3. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1, 2024 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ಬಾಗಲಕೋಟ ವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ.
4. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 ರವರೆಗೆ ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು ವಿಜಯಪುರ ಬದಲು ಬಾಗಲಕೋಟ ನಿಲ್ದಾಣದಿಂದ ತನ್ನ ನಿಗದಿತ ವೇಳಾಪಟ್ಟಿ ಪ್ರಕಾರ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ.
5. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1, 2024 ರವರೆಗೆ ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟ ಬಸವ ಎಕ್ಸ್ ಪ್ರೆಸ್ ರೈಲು ವಿಜಯಪುರ ವರೆಗೆ ಮಾತ್ರ ಸಂಚರಿಸಲಿದೆ. ವಿಜಯಪುರ-ಬಾಗಲಕೋಟ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ.
6. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟ-ಮೈಸೂರು ಬಸವ ಎಕ್ಸ್ಪ್ರೆಸ್ ರೈಲು ಬಾಗಲಕೋಟ ನಿಲ್ದಾಣದ ಬದಲು ವಿಜಯಪುರ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ. ಬಾಗಲಕೋಟ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ರೈಲು ಭಾಗಶಃ ರದ್ದಾಗಿದೆ.
7. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1, 2024 ರವರೆಗೆ ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545 ಯಶವಂತಪುರ-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ಗದಗ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಗದಗ-ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.
8. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 ರವರೆಗೆ ವಿಜಯಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 06546 ವಿಜಯಪುರ-ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು ವಿಜಯಪುರದ ಬದಲು ಗದಗ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ. ವಿಜಯಪುರ-ಗದಗ ನಿಲ್ದಾಣಗಳ ನಡುವೆ ರೈಲು ಭಾಗಶಃ ರದ್ದಾಗಿದೆ.
ನಿಯಂತ್ರಣ:
1. ಅಕ್ಟೋಬರ್ 2, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11305 ಸೋಲಾಪುರ-ಹೊಸಪೇಟೆ ಎಕ್ಸ್ಪ್ರೆಸ್ ರೈಲು ಮಾರ್ಗ ಮಧ್ಯ 45 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
BIG BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಎ16 ಆರೋಪಿ ‘ಕೇಶವಮೂರ್ತಿ’ಗೆ ಹೈಕೋರ್ಟ್ ಜಾಮೀನು ಮಂಜೂರು
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!
BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್