ನವದೆಹಲಿ: ಪಾಕಿಸ್ತಾನದಲ್ಲಿ ನಡೆದ ಪ್ರಮುಖ ಭಯೋತ್ಪಾದಕ ದಾಳಿಯಲ್ಲಿ, ರಷ್ಯಾ ಸೇರಿದಂತೆ 11 ದೇಶಗಳ ರಾಯಭಾರಿಗಳ ಬೆಂಗಾವಲು ವಾಹನದಲ್ಲಿ ಭಾರಿ ಸ್ಫೋಟ ಸಂಭವಿಸಿದೆ.
ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಸ್ವಾತ್ ಜಿಲ್ಲೆಯ ಜಹಾನಾಬಾದ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.
ರಾಜತಾಂತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸಿನ ಹಿಂದೆ ಭದ್ರತೆಗಾಗಿ ಭಾರಿ ಪೊಲೀಸ್ ಪಡೆ ಮತ್ತು ಸೈನ್ಯವನ್ನು ನಿಯೋಜಿಸಲಾಗಿತ್ತು, ಆದರೆ ನಂತರ ಬೆಂಗಾವಲು ಪಡೆಯ ಭಾಗವಾಗಿದ್ದ ಬಸ್ನಲ್ಲಿ ಸ್ಫೋಟ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಎಲ್ಲಾ ರಾಜತಾಂತ್ರಿಕರು ಸುರಕ್ಷಿತವಾಗಿದ್ದಾರೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಂದ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮೈಸೂರು ದಸರಾ ಮಹೋತ್ಸವ: ಈ ಬಾರಿ ಎಂಟು ದಿನಗಳ ಕಾಲ ‘ಯುವ ಸಂಭ್ರಮ’ ಆಯೋಜನೆ | Mysuru Dasara