ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ.
ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ತಡೆಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈಹಿನ್ನೆಲೆಯಲ್ಲಿ ಹಿರಿಯ ವಕೀಲ ಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೂ ರಾಜ್ಯಪಾಲರ ನಿರ್ಧಾರ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.