ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್ 5ರವರೆಗೆ SIT ಕಸ್ಟಡಿಗೆ ನೀಡಿ ಬೆಂಗಳೂರಿನ 42ನೇ ACMM ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮುನಿರತ್ನ ಅವರನ್ನು ಅಕ್ಟೋಬರ್ 5ರ ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮುನಿರತ್ನ ಅವರು ಅಟ್ರಾಸಿಟಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ಬಿಡುಗಡೆಯಾಗಿದ್ದರು. ಬಳಿಕ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲು ಪಾಲಾಗಿದ್ದಾರೆ.
ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಮೇಲೆ ಜೈಲು ಸೇರಿದ ಬಳಿಕ ರಾಜ್ಯ ಸರ್ಕಾರ ಈ ಒಂದು ಪ್ರಕರಣದ ತನಿಖೆಗಾಗಿ ಎಸ್ಐಟಿ ತಂಡ ರಚನೆ ಮಾಡಿ ಆದೇಶ ಹೊರಡಿಸಿತ್ತು. ಇದಾದ ಬಳಿಕ ಎಸ್ಐಟಿ ಅಧಿಕಾರಿಗಳು, ತನಿಖೆ ಕೈಗೊಂಡಿದ್ದರು. ಇಂದು ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್ 5 ರವರೆಗೆ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.