ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಗಳು ನಡೆದು ಜಗಳಗಳು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಿದೆ.ಇದೀಗ ಬೆಂಗಳೂರಿನ ಹನುಮಂತನಗರದಲ್ಲಿ ಕಾರ್ಮಿಕರ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕಾರ್ಮಿಕನ ಬರ್ಬರ ಕೊಲೆ ಮಾಡಲಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಅಜಿತ್ (30) ಎನ್ನುವ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ ಅಜಿತ್ ನ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಹನುಮಂತನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.