ಕೋಲಾರ : ಕೋಲಾರದ ಹೊರವಲಯದ ಟಮಕ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಸೂಟಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡಾಯಿಸಿದೆ. ಪತ್ತೆಯಾದ ಸೂಟ್ ಕೇಸ್ ನಲ್ಲಿ ಶಬ್ದ ಬರುತ್ತಿದೆ ಎನ್ನಲಾಗಿದ್ದು, ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು, ಸ್ಕ್ವಾಡ್, ಶ್ವಾನ ದಳ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.