ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದ ತನಿಖೆಗೆ ಎಫ್ ಐಆರ್ ದಾಖಲಿಸುವಂತೆ ಲೋಕಾಯುಕ್ತಗೆ ದೂರು ನೀಡಲಾಗಿದೆ.
ಮೈಸೂರು ಲೋಕಾಯುಕ್ತ ಎಸ್ ಪಿ ಸುದೇಶ್ ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ದೂರುದಾರ ಪ್ರದೀಪ್ ಮನವಿ ಮಾಡಿದ್ದಾರೆ. .ಕೋರ್ಟ್ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ.
ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಇಂದು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾಕೃಪಾ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೆಕು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.