Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಪೋಷಕರು, ವಿದ್ಯಾರ್ಥಿಗಳೇ ಎಚ್ಚರ : `ಸ್ಕಾಲರ್ ಶಿಪ್’ ಬಗ್ಗೆ ವಾಟ್ಸಪ್ ನಲ್ಲಿ ಹರಿದಾಡುತ್ತಿದೆ `ತಪ್ಪು ಸಂದೇಶ’!
KARNATAKA

ALERT : ಪೋಷಕರು, ವಿದ್ಯಾರ್ಥಿಗಳೇ ಎಚ್ಚರ : `ಸ್ಕಾಲರ್ ಶಿಪ್’ ಬಗ್ಗೆ ವಾಟ್ಸಪ್ ನಲ್ಲಿ ಹರಿದಾಡುತ್ತಿದೆ `ತಪ್ಪು ಸಂದೇಶ’!

By kannadanewsnow5725/09/2024 12:38 PM

ಬೆಂಗಳೂರು : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ. 24,000/-ಗಳ ಸ್ಕಾಲರ್ ವಿದ್ದು, ಜನ ಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು ಜನರಲ್ಲಿ ಗೊಂದಲಕ್ಕೀಡು ಮಾಡಿದೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ. ದಕ್ಷಿಣ ಕನ್ನಡ, ಮಂಗಳೂರು ಎಂಬ ಮೊಹರು ಹಾಕಿರುವ ಈ ವಾಟ್ಸಪ್ ಸಂದೇಶ ಜನರ ಪೋನ್‌ಗಳಲ್ಲಿ ಒಂದು ತಿಂಗಳಿನಿAದ ಹರಿದಾಡುತ್ತಿದೆ. ಈ ಸಂದೇಶವನ್ನು ನೋಡಿದ ಜನ ಪ್ರತಿನಿತ್ಯ ಗ್ರಾಮ ಪಂಚಾಯತ್, ಕಂದಾಯ ಅಧಿಕಾರಿಗಳ ಕಛೇರಿ, ತಾಲ್ಲೂಕು, ಜಿಲ್ಲಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿ ಸೇರಿ ಎಲ್ಲಾ ಕಡೆ ಅಲೆದಾಡುತ್ತಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಛೇರಿಯಲ್ಲಿ ಪ್ರತಿದಿನ ನೂರಾರು ಜನರು ಬಂದು ಯೋಜನೆಯ ಬಗ್ಗೆ ವಿಚಾರಿಸಿ ಅರ್ಜಿ ನೀಡುತ್ತಿರುವುದು ಅಧಿಕಾರಿಗಳಲ್ಲಿ ಚಿಂತೆಗೀಡು ಮಾಡಿದೆ. ಬಹಳಷ್ಟು ಜನರು ದೂರವಾಣಿ ಕರೆ ಮೂಲಕವು ವಿಚಾರಿಸುತ್ತಿದ್ದಾರೆ. ಈ ಸಂದೇಶವನ್ನು ಬಂಡವಾಳ ಮಾಡಿಕೊಂಡಿರುವ ಕೆಲವರು ಅಮಾಯಕ, ಮುಗ್ಧ ಜನರನ್ನು ಸುಲಿಗೆ ಮಾಡಲು ಶುರು ಮಾಡಿದ್ದಾರೆ. ಒಂದೊAದು ಅರ್ಜಿಗೆ ಕನಿಷ್ಠ 5 ರಿಂದ 10 ಸಾವಿರ ರೂಗಳನ್ನು ವಸೂಲಿ ಮಾಡಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ. ಆದ್ದರಿಂದ ಮೋಸ ಹೋಗದಂತೆ ಎಚ್ಚರಿಕೆಯಿಂದಿರಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪುರಸ್ಕತ ಪ್ರಾಯೋಜಕತ್ವ ಈ ಯೋಜನೆಯನ್ನು 2011ರಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ವ್ಯಾಪ್ತಿಗೆ ತರಲಾಗಿದೆ. ಸಂಕಷ್ಟಕ್ಕೆ ಈಡಾಗುವ ಕುಟುಂಬದಲ್ಲಿನ ಮಗು, ಜೈವಿಕ ಕುಟುಂಬದಲ್ಲೇ ಮುಂದುವರೆಯಲು, ಮಗುವಿನ ಶಿಕ್ಷಣ, ಮಕ್ಕಳು ನಿರ್ಗತಿಕರಾಗುವುದು, ಸಂಕಷ್ಟಕ್ಕೀಡಾಗುವುದು, ಓಡಿಹೋಗುವುದು, ಬಲವಂತದ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮುಂತಾದವುಗಳಿAದ ತಡೆಗಟ್ಟುವ ಪ್ರಯತ್ನ ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಯೋಜನೆಯ ಪ್ರಕಾರ ಫಲಾನುಭವಿಯಾಗಲು ಕೆಲವು ವಿಶೇಷ ಮಾನದಂಡಗಳಿವೆ. ಇಬ್ಬರೂ ಪೋಷಕರನ್ನು ಕಳೆದುಕೊಂಡ ಮಕ್ಕಳು, ಪೋಷಕರು ಕಾರಾಗೃಹದಲ್ಲಿರುವ ಮಕ್ಕಳು, ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಪಟ್ಟಿರುವವರ ಮಕ್ಕಳು, ಪಿ.ಎಂ ಕೇರ್ ಚಿಲ್ಟನ್ ಯೋಜನೆಯ ಅನುಮೋದಿತ ಮಕ್ಕಳು, ಬಾಲಕಾರ್ಮಿಕ ಸಂತ್ರಸ್ಥರು, ಮಕ್ಕಳ ಕಳ್ಳಸಾಗಾಣಿಕೆಗೆ ಒಳಗಾದ ಮಕ್ಕಳು, ಬಾಲ್ಯವಿವಾಹಕ್ಕೊಳಗಾದ ಮಕ್ಕಳು, ಪೋಕೋ ಸಂತ್ರಸ್ಥ ಮಕ್ಕಳು, ಪೋಷಕರಿಬ್ಬರೂ ಮಾರಾಣಾಂತಿಕ ಕಾಯಿಲೆಗೆ ತುತ್ತಾಗಿರುವವರ ಮಕ್ಕಳು, ಬಾಲಸ್ವರಾಜ್ ಪೋರ್ಟಲ್ ನಲ್ಲಿ ನೊಂದಾಯಿಸಲಾದ ಮಕ್ಕಳು, ಪಾಲನೆ ಮತ್ತು ರಕ್ಷಣೆಗೆ ಅಗತ್ಯವಿರುವ ಪಾಲನಾ ಸಂಸ್ಥೆಯ ಮಕ್ಕಳು ಹಾಗೂ ಇತರೆ ದುಡಿಯುವ ಪೋಷಕರನ್ನು ಕಳೆದುಕೊಂಡ ವಿಧವೆ, ವಿಚ್ಛೇದಿತ ಮತ್ತು ವಿಸ್ತತ ಕುಟುಂಬದ ಮಕ್ಕಳು ಈ ಯೋಜನೆಯ ವ್ಯಾಪ್ತಿಗೆ ಒಳಪಡುವರು. ಅದ್ದರಿಂದ ಸುಳ್ಳು ಸಂದೇಶ ನಂಬದಿರುವAತೆ ಸಾರ್ವಜನಿಕರಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ALERT : ಪೋಷಕರು ALERT: Parents students beware: WhatsApp is spreading a 'wrong message' about 'scholarship'! ವಿದ್ಯಾರ್ಥಿಗಳೇ ಎಚ್ಚರ : `ಸ್ಕಾಲರ್ ಶಿಪ್' ಬಗ್ಗೆ ವಾಟ್ಸಪ್ ನಲ್ಲಿ ಹರಿದಾಡುತ್ತಿದೆ `ತಪ್ಪು ಸಂದೇಶ'!
Share. Facebook Twitter LinkedIn WhatsApp Email

Related Posts

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM1 Min Read

ALERT : ಯೋನಿ ಸೋಂಕಿಗೆ ಕೇವಲ ಅಶುಚಿಯಷ್ಟೇ ಕಾರಣವಲ್ಲ : ಮಹಿಳೆಯರು ತಿಳಿದುಕೊಳ್ಳಲೇಬೇಕು ಈ 12 ಅಂಶಗಳು !

26/03/2026 7:32 PM2 Mins Read

ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ

26/03/2026 7:30 PM1 Min Read
Recent News

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM
State News
KARNATAKA

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

By kannadanewsnow0926/03/2026 7:34 PM KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಗುರುವಾರ ನೋಟಿಸ್…

ALERT : ಯೋನಿ ಸೋಂಕಿಗೆ ಕೇವಲ ಅಶುಚಿಯಷ್ಟೇ ಕಾರಣವಲ್ಲ : ಮಹಿಳೆಯರು ತಿಳಿದುಕೊಳ್ಳಲೇಬೇಕು ಈ 12 ಅಂಶಗಳು !

26/03/2026 7:32 PM

ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ

26/03/2026 7:30 PM

ನೀವು ಖರ್ಚು ಮಾಡಿದ 1 ರೂಪಾಯಿ ಕೂಡ ನಿಮಗೆ 1000 ರೂಪಾಯಿಗಳನ್ನು ಹಿಂತಿರುಗಿ ಬರಲು ಹೀಗೆ ಮಾಡಿ.!

26/03/2026 6:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.