ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ.
ಈ ಒಂದು ಆದೇಶದ ಕುರಿತಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾನು ಈಗ ಕೇರಳಕ್ಕೆ ಹೋಗುತ್ತಿದ್ದೇನೆ. ನನಗೆ ಇನ್ನೂ ಆದೇಶದ ಪ್ರತಿ ಸಿಕ್ಕಿಲ್ಲ ಆ ಒಂದು ಆದೇಶದ ಸಂಪೂರ್ಣ ಆದೇಶದ ಪ್ರತಿ ಸಿಕ್ಕರೆ ಪ್ರತಿಕ್ರಿಯೆ ನೀಡುತ್ತೇನೆ. ಕೋರ್ಟ್ ಆದೇಶದ ಪ್ರತಿ ಸಿಕ್ಕ ಮೇಲೆ ವಕೀಲರ ಜೊತೆ ಚರ್ಚಿಸುತ್ತೆನೆ. ವಕೀಲರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ.ನಾವು ತನಿಖೆ ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಯಾವುದೇ ರೀತಿ ಹೆದರುವುದಿಲ್ಲ ಎಂದರು.
ಕಾನೂನಿನ ಜೊತೆ ಹೋರಾಟ ಮಾಡಲಿಕ್ಕೆ ತಯಾರಾಗಿದ್ದೇವೆ.ನಿನ್ನೆ ಈ ಮಾತು ಹೇಳಿದ್ದೇನೆ. ಇವತ್ತು ಕೂಡ ಹೇಳುತ್ತಿದ್ದೇನೆ. ನನಗೆ ಗೊತ್ತಿರುವ ಮಟ್ಟಿಗೆ ಲೋಕಾಯುಕ್ತ ಗೆ ರೆಫರ್ ಮಾಡಿದ್ದಾರೆ.ಹಾಗಾಗಿ ಹೈಕೋರ್ಟ್ ತನಿಖೆ ಮಾಡಿ ಅಂತ ನಿನ್ನೇನೆ ಹೇಳಿದೆ. ಅದರ ಅನ್ವಯ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ ಅದರ ಪ್ರಯುಕ್ತ ಈಗ ತನಿಖೆಗೆ ಆದೇಶ ನೀಡಿದ್ದಾರೆ ಎಂದು ಅವರು ತಿಳಿಸಿದರು.