ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಎತ್ತಿ ಹಿಡಿದು, ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಚಗೊಳಿಸಿತ್ತು. ಇದರ ಬೆನ್ನಲ್ಲೇ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ, ಮುಡಾ ಹಗರಣದಲ್ಲಿ ಯಾವ ಬ್ಲ್ಯಾಕ್ ಮಾರ್ಕ್ ಇಲ್ಲ ಸಿದ್ದರಾಮಯ್ಯ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಡಾ ಹಗರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿರಬಹುದು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕೋರ್ಟ್ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆದ ಮೇಲೆ ಎಲ್ಲಾ ಗೊತ್ತಾಗುತ್ತದೆ ಎಂದರು.
ಮುಡಾ ಪ್ರಕರಣದಲ್ಲಿ ಯಾವ ಬ್ಲಾಕ್ ಮಾರ್ಕ್ ಕೂಡ ಆಗಿಲ್ಲ. ಯಾವ ಬ್ಲ್ಯಾಕ್ ಮಾರ್ಕ್ ಸಹ ಆಗಿಲ್ಲ ಮಾರ್ಕೆ ಆಗಿಲ್ಲ ಬ್ಲಾಕ್ ಮಾರ್ಕ್ ಎಲ್ಲಿಂದ ಬರುತ್ತೆ? ಸಿದ್ದರಾಮಯ್ಯ ಆರೋಪ ಮುಕ್ತರಾಗಿ ಹೊರಬರುತ್ತಾರೆ ನಮಗೆ ಭರವಸೆ ಇದೆ ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.