ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಧಿಗಳ ವಿಶೇಷ ಕೋರ್ಟ್ ನಿನ್ನೆ ಆದೇಶ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಎಫ್ ಐಆರ್ ದಾಖಲಾಗುವ ಸಾಧ್ಯತೆ ಇದ್ದು, ಕಾನೂನು ತಜ್ಞರು, ಹಿರಿಯ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಸಿಎಂಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅದೇಶ ನೀಡಿದ ಬೆನ್ನಲ್ಲೇ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಜ್ಞರು, ಹಿರಿಯ ಸಚಿವರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಾಜಿ ಸಿಎಂ ಮೊಯ್ಲಿ, ಅಡ್ವೊಕೇಟ್ ಜನರಲ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ್ದು, ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ2, ಪತ್ನಿ ಸಹೋದರ ಮಲ್ಲಿಕಾರ್ಜನ್ ಸ್ವಾಮಿ ಎ3, ಜಮೀನು ಮಾರಿದ ದೇವರಾಜು ಎ4 ಹಾಗೂ ಇತರರ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಲಾಗಿದೆ.