ನವದೆಹಲಿ:ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿತ್ ಸೋಮಯ್ಯ ಅವರು ಸಲ್ಲಿಸಿದ್ದ ದೂರಿನ ಮೇರೆಗೆ ಶಿವಸೇನೆ (ಯುಬಿಟಿ) ಮುಖಂಡ ಸಂಜಯ್ ರಾವತ್ ಅವರನ್ನು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ
ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯವು ರಾವತ್ ಅವರಿಗೆ 25,000 ರೂ.ಗಳ ದಂಡ ವಿಧಿಸಿದೆ ಮತ್ತು 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.
ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಸಂಬಂಧಿಸಿದ 100 ಕೋಟಿ ರೂ.ಗಳ ಭ್ರಷ್ಟಾಚಾರ ಪ್ರಕರಣದಲ್ಲಿ ತಾನು ಮತ್ತು ತನ್ನ ಪತಿ ಕಿರಿತ್ ಸೋಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ರಾವತ್ ಸೊಮಯ್ಯ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ ನಂತರ ಡಾ.ಮೇಧಾ ಸೋಮಯ್ಯ ಅವರು ಪ್ರಕರಣ ದಾಖಲಿಸಿದ್ದಾರೆ.