ಶಿವಮೊಗ್ಗ : ಮುಡಾ ಹಗರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಇಂದು ವಿಧಾನಸೌಧ ಮುಂಭಾಗದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಸಿದ್ದರಾಮಯ್ಯ ರಾಜೀನಾಮೆ ಕುರಿತು ಕೇಂದ್ರ ಸಚಿವರಾದ ವಿ. ಸೋಮಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಜೊತೆಗೆ ಶಾಸಕನಾಗಿ, ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಕಾನೂನನ್ನು ಸಿಎಂ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಒಬ್ಬ ಸೂಕ್ಷ್ಮ ರಾಜಕಾರಣಿ ಎಂದು ಅವರು ತಿಳಿಸಿದರು.
ಅವರು ರಾಜೀನಾಮೆ ಕೊಟ್ಟೆ ಕೊಡ್ತಾರೆ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ತನಿಖೆ ಎದುರಿಸಲು ರಾಜೀನಾಮೆ ಕೊಡುತ್ತಾರೆ ಎಂಬುದು ನನ್ನ ಅಭಿಪ್ರಾಯ ಎಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿಕೆ ನೀಡಿದರು.