ಬೆಂಗಳೂರು: ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ.
ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಮಾಧ್ಯಮದವರಿಗೆ ತಿಳಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದೆ. ಕೇಂದ್ರಕ್ಕೆ ಇದನ್ನೇ ರೆಫರ್ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಹಿಂದೆಯೂ ಇದೇ ನಿರ್ಣಯ ತೆಗೆದುಕೊಳ್ಳಲಾಗಿತ್ತು ಎಂದರು.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಚುನಾವಣೆ ನಿಗದಿಯಾಗಿದೆ. ಎಂಎಲ್ ಸಿ ಬೈ ಎಲೆಕ್ಷನ್ ಗೆ ಸಮ್ಮತಿ ನೀಡಲಾಗಿದೆ. ಮೇಲ್ಮನೆಯ ಎರಡು ಸ್ಥಾನಗಳಿಗೆ ನಾಮಕರಣ ಮಾಡಲಾಗುತ್ತಿದೆ. ಆಯ್ಕೆ ಮಾಡುವ ಅಧಿಕಾರ ಸಿಎಂಗೆ ನೀಡಿಕೆ ಮಾಡಲಾಗಿದೆ ಎಂದರು.
ಬೆಂಗಳೂರು ವಿವಿ ಅಭಿವೃದ್ಧಿಗೆ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದೆ. ಐಐಟಿ ಮಾದರಿಯಲ್ಲಿ ನಿರ್ಮಿಸಲು ಅನುದಾನ ನೀಡಲಾಗುತ್ತಿದೆ. 530 ಕೋಟಿ ಅನುದಾನ ನೀಡಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಸಿಖ್ ಸಮುದಾಯ ವಿವಾಹ ನೊಂದಣಿಗೆ ತಿದ್ದುಪಡಿ ತರಲಾಗುತ್ತಿದೆ. ಹಿಂದೂ ವಿವಾಹ ಕಾಯ್ದೆಯಡಿ ನೊಂದಣಿಯಿತ್ತು. ಇದು ವಿದೇಶಿ ಪ್ರವಾಸದ ವೇಳೆ ಗೊಂದಲಕ್ಕೆ ಕಾರಣವಾಗಿತ್ತು. ಹಾಗಾಗಿ ನಿಯಮ ರೂಪಿಸಲು ಅನುಮತಿ ನೀಡಲಾಗಿದೆ ಎಂದರು.
ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಮೂರು ದಿನಗಳ ‘ಸಹ್ಯಾದ್ರಿ ಸಡಗರ’ಕ್ಕೆ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಚಾಲನೆ